ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಿ ಮಾದರಿಯಾದ HANDS TO SUPPORT GROUP
ಹುಬ್ಬಳ್ಳಿ: ನಗರದ ಉಣಕಲ್ ತಾಜನಗರದಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ HANDS TO SUPPORT GROUP ವತಿಯಿಂದ ಟಿ-ಶರ್ಟ್ ಹಾಗೂ ಟ್ರ್ಯಾಕ್ ಪ್ಯಾಂಟ್‌ಗಳನ್ನು ಉಚಿತವಾಗಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಫೌಂಡೇಶನ್‌ನ ಸಂಸ್ಥಾಪಕ ಹಾಗೂ ಮುಖ್ಯಸ್ಥ ಮೌಲಾಸಾಬ ನದಾಫ ಮಾತನಾಡಿ, ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಶಿಮ್ ಕೂಡಲಗಿ, ಇಸ್ಮಾಯಿಲ್ ಸುಂಕದ, ಉಮರ ಕಿತ್ತೂರ, ಮಾಬುಲಿ ಗೋಕುಲ, ಅಲಿ ಗೋಕುಲ ಹಾಗೂ ಸಯ್ಯದ್ ಕೊಪ್ಪದ ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಈ ಸಮಾಜಮುಖಿ ಕಾರ್ಯಕ್ಕೆ HANDS TO SUPPORT GROUP ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
yallu