ಕೃಷಿ ಭೂಮಿಯಲ್ಲಿ ಅನಧಿಕೃತ ಶೆಡ್ ನಿರ್ಮಾಣ; ತೆರವುಗೊಳಿಸದಿದ್ದರೆ ಪ್ರತಿಭಟನೆ: ಹಣಮಂತ ತಳವಾರ ಎಚ್ಚರಿಕೆ
ಕೃಷಿ ಭೂಮಿಯಲ್ಲಿ ಅನಧಿಕೃತ ಶೆಡ್ ನಿರ್ಮಾಣ; ತೆರವುಗೊಳಿಸದಿದ್ದರೆ ಉಗ್ರ ಪ್ರತಿಭಟನೆ: ಹಣಮಂತ ತಳವಾರ ಎಚ್ಚರಿಕೆ
ಹುಬ್ಬಳ್ಳಿ: ವಾಣಿಜ್ಯ ನಗರಿಯಾದ ಹುಬ್ಬಳ್ಳಿಯ ಗೋಕುಲ್ ರೋಡ್‌ನ ಕೃಷ್ಣಾಪುರ ಓಣಿಯಲ್ಲಿರುವ ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಶೆಡ್‌ಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಕೊನೆಯ ಎಚ್ಚರಿಕೆ ನೀಡಲಾಗಿದೆ. ಶೆಡ್ ಮುಂಭಾಗ ಜೆಸಿಬಿ ನಿಲ್ಲಿಸಿ ತಕ್ಷಣ ತೆರವುಗೊಳಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಹಣಮಂತ ತಳವಾರ ಅವರು ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋಕುಲ್ ರೋಡ್ ಮುಖ್ಯ ರಸ್ತೆಯಲ್ಲಿರುವ ಈ ಜಾಗವು ಉತಾರ ದಾಖಲೆಗಳ ಪ್ರಕಾರ ಕೃಷಿ ಭೂಮಿಯಾಗಿದ್ದು, ಭೂಮಿಯ ಪೋಡಿ ಪ್ರಕ್ರಿಯೆಯೂ ಪೂರ್ಣಗೊಂಡಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ, ವಿವಿಧ ಮಾಲೀಕತ್ವ ಹೊಂದಿರುವ ಜಾಗದಲ್ಲಿ ಪಾಲಿಕೆಯ ಅನುಮತಿ ಪಡೆಯದೇ ಬೃಹತ್ ಶೆಡ್ ನಿರ್ಮಿಸಿ, ‘ಸುವರ್ಣ ಗ್ರ್ಯಾನೈಟ್’ ಹೆಸರಿನಲ್ಲಿ ವ್ಯಾಪಾರ ಆರಂಭಿಸಿರುವ ಆರೋಪ ಕೇಳಿಬಂದಿದೆ.
ಈ ಕುರಿತು ಈಗಾಗಲೇ ಪಾಲಿಕೆ ಅಧಿಕಾರಿಗಳು ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆಯ ಸೆಕ್ಷನ್ 321ರ ಅಡಿಯಲ್ಲಿ ಡೆಮೋಲೇಶನ್ ನೋಟಿಸ್ ಜಾರಿಗೊಳಿಸಿದ್ದರು. ಆದರೆ ನೋಟಿಸ್ ನೀಡಿದ ಬಳಿಕವೂ ಕಾಮಗಾರಿ ನಿಲ್ಲಿಸದೇ ಮುಂದುವರಿಸಲಾಗಿದೆ ಎಂಬ ಆರೋಪವೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಇದರಿಂದಾಗಿ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಶೆಡ್ ಮುಂಭಾಗ ಜೆಸಿಬಿ ನಿಲ್ಲಿಸಿ ಕೊನೆಯ ನೋಟಿಸ್ ನೀಡಿದ್ದಾರೆ. ಆದಾಗ್ಯೂ, ಇದುವರೆಗೆ ಶೆಡ್ ತೆರವುಗೊಳಿಸದಿರುವ ಹಿನ್ನೆಲೆಯಲ್ಲಿ ರಾಜಕೀಯ ಒತ್ತಡಕ್ಕೆ ಅಧಿಕಾರಿಗಳು ಮಣಿಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ ಎಂದು ಹಣಮಂತ ತಳವಾರ ಆರೋಪಿಸಿದ್ದಾರೆ.
ಇನ್ನೂ ತಕ್ಷಣವೇ ಅನಧಿಕೃತ ಶೆಡ್ ತೆರವುಗೊಳಿಸದಿದ್ದರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
ಬಡವರಿಗೆ ಒಂದು ನ್ಯಾಯ ಶ್ರೀಮಂತರಿಗೆ ಒಂದು ನ್ಯಾಯ ಏನಿದು ? ಎಂದು ಪ್ರಶ್ನೆ ಮಾಡಿದ್ದಾರೆ.
ವರದಿ: ರಾಜು ಮುದ್ಗಲ್, ಹುಬ್ಬಳ್ಳಿ
yallu