ಡಾ.ರಮೇಶ್ ಮಹಾದೇವಪ್ಪನವರಗೆ ಜನ್ಮದಿನ ಶುಭಾಶಯ ಕೋರಿದ ಜನಪ್ರಿಯ ಶಾಸಕ ಪ್ರಸಾದ್ ಅಬ್ಬಯ್ಯ
ಹುಬ್ಬಳ್ಳಿ: ಹುಬ್ಬಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಅವರ ಜನ್ಮದಿನದ ಅಂಗವಾಗಿ ಶುಭಾಶಯ ಕೋರಿದರು.
ಭಾರತೀಯ ಸೇನೆಯ ಅಗ್ನಿವೀರ ಯೋಜನೆಗೆ ಆಯ್ಕೆಯಾದ ಯುವ ಸಾಧಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ, ಡಾ. ರಮೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಈ ವೇಳೆ ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಡಾ. ರಮೇಶ್ ಅವರು ಸಮಾಜ ಸೇವೆಯಲ್ಲಿ ಸಲ್ಲಿಸುತ್ತಿರುವ ಅಮೂಲ್ಯ ಕೊಡುಗೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು. "ಸಮಾಜದ ಒಳಿತಿಗಾಗಿ ನೀವು ಮಾಡುತ್ತಿರುವ ಸೇವಾ ಕಾರ್ಯಗಳು ಶ್ಲಾಘನೀಯ. ದೇವರು ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ಮತ್ತು ಇನ್ನಷ್ಟು ಸೇವೆ ಮಾಡುವ ಶಕ್ತಿ ನೀಡಲಿ" ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಹಾಗೂ ಯುವ ಸಾಧಕರು ಡಾ. ರಮೇಶ್ ಅವರ ಸಮಾಜಸೇವಾ ಕಾರ್ಯವನ್ನು ಶ್ಲಾಘಿಸಿ, ಅವರ ಮುಂದಿನ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
yallu