"ಡಾ.ರಮೇಶ್ ಗೆ ಚುಟುಕು ಚೇತನ ಗೌರವ ಪ್ರಶಸ್ತಿ ಪ್ರದಾನ"
ಧಾರವಾಡ: ನಗರದ ರಂಗಾಯಣ ಸಭಾಂಗಣದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಎಂಟನೇ ಸಮ್ಮೇಳನವು ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕರಾದ ಡಾ. ರಮೇಶ್ ಮಹಾದೇವಪ್ಪನವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ದೀಪ ಬೆಳಗಿಸುವ ಮೂಲಕ ಸಮ್ಮೇಳನವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸಾಹಿತ್ಯವು ಸಮಾಜದ ಮೌಲ್ಯಗಳನ್ನು ಉಳಿಸಿ ಬೆಳೆಸುವ ಶಕ್ತಿಯಾಗಿದ್ದು, ಚುಟುಕು ಸಾಹಿತ್ಯವು ಕಡಿಮೆ ಪದಗಳಲ್ಲಿ ಪರಿಣಾಮಕಾರಿ ಸಂದೇಶವನ್ನು ನೀಡುವ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸಾಹಿತ್ಯ, ಸಮಾಜಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಡಾ. ರಮೇಶ್ ಮಹಾದೇವಪ್ಪನವರಿಗೆ "ಚುಟುಕು ಚೇತನ ಗೌರವ ಪ್ರಶಸ್ತಿ" ಪ್ರದಾನ ಮಾಡಿ ಆತ್ಮೀಯವಾಗಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಚಾಲಕರಾದ ಶ್ರೀ ಕೃಷ್ಣಮೂರ್ತಿ ಕುಲಕರ್ಣಿ, ಶ್ರೀ ಚನ್ನಬಸಪ್ಪ ಧಾರವಾಡ ಶೆಟ್ರು, ಎಸ್.ಐ. ನೇಕಾರ, ಶ್ರೀ ಶಂಕರ್ ಕುಂಬಿ, ಶ್ರೀಮತಿ ವಂದನಾ ರಮೇಶ್ ಸೇರಿದಂತೆ ಅನೇಕ ಗಣ್ಯರು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು. ಸಮ್ಮೇಳನವು ಸಾಹಿತ್ಯ ಪ್ರೇಮಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.
yallu