KPCC ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಶ್ರೀಮತಿ ಶಿವಲೀಲಾ ಕುಲಕರ್ಣಿ ಅವರು ರಾಷ್ಟ್ರದ ಧ್ವಜ ನೀಡಿ ಸತ್ಕಾರ!
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಹಳೇ ಹುಬ್ಬಳ್ಳಿಯ ಡಾ. ಬಾಬು ಜಗಜೀವನರಾಮ್ ಸಮುದಾಯ ಭವನದಲ್ಲಿ ಗುರುವಾರ ಎಸ್.ಐ.ಆರ್. ಕುರಿತು ಬೆಳಗಾವಿ ವಿಭಾಗ ಮಟ್ಟದ ಜನಜಾಗೃತಿ ಸಮಾವೇಶವು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ನಡೆಯಿತು.
ಕೆಪಿಸಿಸಿ ಅಧ್ಯಕ್ಷರಾಗಿ ಪ್ರಥಮ ಬಾರಿಗೆ ಹುಬ್ಬಳ್ಳಿ ನಗರಕ್ಕೆ ಆಗಮಿಸಿದ ಬಿ.ಕೆ. ಹರಿಪ್ರಸಾದ್ ಅವರನ್ನು ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷೆ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿ ಅವರ ನೇತೃತ್ವದಲ್ಲಿ ಗರಗ ಖಾದಿ ಗ್ರಾಮೋದ್ಯೋಗದಲ್ಲಿ ನಿರ್ಮಿತ ರಾಷ್ಟ್ರಧ್ವಜವನ್ನು ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆ, ಜನಜಾಗೃತಿ ಕಾರ್ಯಕ್ರಮಗಳು ಹಾಗೂ ಸಮಕಾಲೀನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಯಿತು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ, ರೇಣುಕಾ ಕಳ್ಳಿಮನಿ, ಗಿರೀಶ್ ಕಲ್ಲಾಪುರ, ಕಿಶೋರ ಬಡಿಗೇರ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
yallu