ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನಕ್ಕೆ ಡಾ.ರಮೇಶ್ ಚಾಲನೆ

ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನಕ್ಕೆ ಡಾ.ರಮೇಶ್ ಚಾಲನೆ

ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

ಹುಬ್ಬಳ್ಳಿ: ಮಧುರ ಎಸ್ಟೇಟ್ ಸಮುದಾಯ ಭವನದಲ್ಲಿ ನಡೆದ ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಪೋಷಕರಿಗೆ ಮನವಿ ಮಾಡಿದರು. ಪೋಲಿಯೋ ಶಾಶ್ವತ ಅಂಗವಿಕಲತೆಗೆ ಕಾರಣವಾಗಬಹುದಾದ ಗಂಭೀರ ಕಾಯಿಲೆಯಾಗಿದ್ದು, ಲಸಿಕೆಯ ಮೂಲಕ ಅದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ತಿಳಿಸಿದರು.

"ಪ್ರತಿಯೊಂದು ಮಗುವಿಗೂ ಎರಡು ಹನಿ – ಪೋಲಿಯೋ ಮುಕ್ತ, ಆರೋಗ್ಯವಂತ ಭಾರತ ನಮ್ಮೆಲ್ಲರ ಸಂಕಲ್ಪ" ಎಂದು ಕರೆ ನೀಡಿದ ಅವರು, ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸುವ ಮೂಲಕ ರಾಷ್ಟ್ರೀಯ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ, ಪವನ್ ಗೌಡ್ರು, ಸುನಿಲ್ ಗುಮಸ್ತೆ, ದಿಲೀಪ್ ಹಣಗಿ, ಪುಷ್ಪ ಹಿರೇಮಠ, ಭಾರತಿ ಶೆಟ್ಟರ್, ಮಂಜುಳಾ ಸಿರುಗುಪ್ಪಿ ಹಾಗೂ ರೇಣುಕಾ ಗುಡ್ಡಮ್ಮನವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.