ಬೆಂಗೇರಿಯ ಅಜಾದ್ ಸೊಸೈಟಿಯಲ್ಲಿ ₹20 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ
ಬೆಂಗೇರಿಯ ಅಜಾದ್ ಸೊಸೈಟಿಯಲ್ಲಿ ₹20 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ
ಹುಬ್ಬಳ್ಳಿ: ಬೆಂಗೇರಿಯ ಅಜಾದ್ ಸೊಸೈಟಿಯಲ್ಲಿ ₹20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆಯ ಕಾಮಗಾರಿಗೆ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಎಂ. ವೈ. ನರಗುಂದ ಅವರು ಪೂಜೆ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಜಾದ್ ಸೊಸೈಟಿಯ ಜನರ ಬಹುಕಾಲದ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾಜಸೇವಕರಾದ ಡಾ. ರಮೇಶ್ ಮಹಾದೇವಪ್ಪನವರ, ಹಿರಿಯರಾದ ದಶರಥ ಕಾಳೆ, ಶ್ರೀ ನಾಗಪ್ಪ ಹೊಂಡದಕಟ್ಟಿ, ಶ್ರೀ ರವಿ ಮಳಗಿ, ಶ್ರೀ ಶಿವಾನಂದ ಕಾಳೆ, ಶ್ರೀ ರಜಾಕ್ ನದಾಫ್, ಶ್ರೀ ಸವದತ್ತಿ, ಶ್ರೀ ಮುಲ್ಲಾ, ಶ್ರೀ ಖಾಜಿ ಸೇರಿದಂತೆ ಅನೇಕ ಗಣ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದು, ಕಾಮಗಾರಿ ಆರಂಭಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
yallu