ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ: ಪಕ್ಷ ಸಂಘಟನೆಗೆ ಸೌಮ್ಯಾ ರೆಡ್ಡಿ ಕರೆ ಹುಬ್ಬಳ್ಳಿ:

ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ: ಪಕ್ಷ ಸಂಘಟನೆಗೆ ಸೌಮ್ಯಾ ರೆಡ್ಡಿ ಕರೆ  ಹುಬ್ಬಳ್ಳಿ:

ಬೆಂಗಳೂರು:- ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಅವರ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಮುಂಬರುವ ಚುನಾವಣೆ ಹಾಗೂ ಪಕ್ಷ ಸಂಘಟನೆ ಕುರಿತು ಪ್ರಮುಖ ಚರ್ಚೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸೌಮ್ಯಾ ರೆಡ್ಡಿ, ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಕರೆ ನೀಡಿದರು.
ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ಬಳಿಕ ದೇಶದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಬ್ಬ ಕಾರ್ಯಕರ್ತರೂ ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಹಾಗೂ ಕಾಂಗ್ರೆಸ್ ಸರ್ಕಾರಗಳ ಸಾಧನೆಗಳು ಮತ್ತು ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕಾರಿಣಿ ಸಭೆಯಲ್ಲಿ ಹುಬ್ಬಳ್ಳಿ ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ಗೌರಮ್ಮಾ ಬಲೋಗಿ ಅವರು ಭಾಗವಹಿಸಿ, ಹುಬ್ಬಳ್ಳಿ-ಧಾರವಾಡದಲ್ಲಿ ಮಹಿಳಾ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದಾಗಿ ಭರವಸೆ ನೀಡಿದರು. ಧಾರವಾಡ ಜಿಲ್ಲೆಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿಕೆ‌ಹರಿಪ್ರಸಾದ್ ಸಹ ಮಾತನಾಡಿ ಮಹಿಳಾ ಕಾಂಗ್ರೆಸ್ ಸಂಘಟನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ಅನಾಡ್, ಶಾರದಾ ನಿಗದಿ, ಬಾಳಮ್ಮ ಜಂಗಿನವರ, ಅಕ್ಕಮ್ಮ ಕಂಬಳಿ, ರೇಷ್ಮಾ ಶೇಕ್ ಸನದಿ,ಇದ್ದರು.