ಬೆಳಗಾವಿ:- ಸ್ಕೈವರ್ಡ್ ಏವಿಯೇಷನ್ ಅಕಾಡೆಮಿಯಲ್ಲಿ ಭಾರತದ ಸಾಂಸ್ಕೃತಿಕ ವೈವಿಧ್ಯತೆಯ ಅನಾವರಣ!

Hubli dharwad

ಬೆಳಗಾವಿ:- ಸ್ಕೈವರ್ಡ್ ಏವಿಯೇಷನ್ ಅಕಾಡೆಮಿಯಲ್ಲಿ ಭಾರತದ ಸಾಂಸ್ಕೃತಿಕ ವೈವಿಧ್ಯತೆಯ ಅನಾವರಣ!


ಬೆಳಗಾವಿ: ಬೆಳಗಾವಿಯ ಸ್ಕೈವರ್ಡ್ ಏವಿಯೇಷನ್ ಅಕಾಡೆಮಿಯಲ್ಲಿ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಹಾಗೂ ಭಾರತೀಯ ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಬಿಂಬಿಸುವ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾರತದ ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಗೆ-ತೊಡುಗೆಗಳನ್ನು ಧರಿಸಿ, ಆಯಾ ರಾಜ್ಯಗಳ ವಿಶಿಷ್ಟ ಸಂಪ್ರದಾಯ, ಸಂಸ್ಕೃತಿ ಹಾಗೂ ಶ್ರೀಮಂತ ಪರಂಪರೆಯನ್ನು ಸುಂದರವಾಗಿ ಪ್ರದರ್ಶಿಸಿದರು. ಒಟ್ಟು 25 ರಾಜ್ಯಗಳನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು ವೈವಿಧ್ಯಮಯ ಉಡುಗೆಗಳ ಮೂಲಕ ಎಲ್ಲರ ಗಮನ ಸೆಳೆದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಸಾಂಪ್ರದಾಯಿಕ ಉಡುಗೆಗಳಲ್ಲಿ ಕಂಗೊಳಿಸುತ್ತಾ ಭಾರತದ “ವೈವಿಧ್ಯತೆಯಲ್ಲಿ ಏಕತೆ” ಎಂಬ ಸಂದೇಶವನ್ನು ಸಾರಿದರು. ವಿದ್ಯಾರ್ಥಿಗಳ ಆತ್ಮವಿಶ್ವಾಸ, ಪ್ರತಿಭೆ ಹಾಗೂ ಪ್ರಸ್ತುತಪಡಿಸುವ ಶೈಲಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಈ ಕಾರ್ಯಕ್ರಮದ ತೀರ್ಪುಗಾರರಾಗಿ ಸ್ಕೈವರ್ಡ್ ಏವಿಯೇಷನ್ ಅಕಾಡೆಮಿಯ ಸಿಇಒ ವಿನೋದ್ ಬಾಮಣೆ ಅವರು ಭಾಗವಹಿಸಿ, ವಿದ್ಯಾರ್ಥಿಗಳ ಪ್ರದರ್ಶನ ಹಾಗೂ ಪ್ರಸ್ತುತಿಯನ್ನು ಮೌಲ್ಯಮಾಪನ ಮಾಡಿದರು.

ಕಾರ್ಯಕ್ರಮದಲ್ಲಿ ಅತ್ಯುತ್ತಮವಾಗಿ ಪ್ರದರ್ಶನ ನೀಡಿದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಬಹುಮಾನ ವಿಜೇತರನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳ ಉತ್ಸಾಹ, ಪರಿಶ್ರಮ ಮತ್ತು ಪ್ರತಿಭೆಗೆ ಮೆಚ್ಚುಗೆ ವ್ಯಕ್ತವಾಯಿತು.