"ಸತ್ಯನಾರಾಯಣ" ಪೂಜೆಯಲ್ಲಿ ಭಕ್ತಿಯ ಕಂಪು ವಿಜಯನಗರ ವಲಯದಲ್ಲಿ ಧಾರ್ಮಿಕ ಸಭೆ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರಿಂದ ಪ್ರಮಾಣಪತ್ರ ವಿತರಣೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಜಯನಗರ ವಲಯದಲ್ಲಿ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ; ಶಾಸಕ ಮಹೇಶ್ ಟೆಂಗಿನಕಾಯಿ ಅವರಿಂದ ಒಲಂಪಿಯಾಡ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣೆ
ಹುಬ್ಬಳ್ಳಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹುಬ್ಬಳ್ಳಿ ಗ್ರಾಮೀಣ ತಾಲೂಕು, ವಿಜಯನಗರ ವಲಯದ ವತಿಯಿಂದ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪಂಚಗ್ರಹ ಗುಡ್ಡದ ಹಿರೇಮಠದ ಶ್ರೀ ಮ.ಘ.ಚ. ಶ್ರೀ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ನರಗುಂದ_ ಅವರು ವಹಿಸಿ ಆಶೀರ್ವಚನ ನೀಡಿದರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕರಾದ ಮಹೇಶ್ ಟೆಂಗಿನಕಾಯಿ_ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಕ್ಷೇತ್ರ ಧರ್ಮಸ್ಥಳ ಹಾಗೂ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು_ ನಡೆಸುತ್ತಿರುವ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಯೋಜನೆಯ ವತಿಯಿಂದ ನಡೆಸಲಾದ ಒಲಂಪಿಯಾಡ್ ಪರೀಕ್ಷೆಯಲ್ಲಿ ಭಾಗವಹಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಿಸಿ ಪ್ರೋತ್ಸಾಹಿಸಿದರು.
ಕಾರ್ಯಕ್ರಮವನ್ನು ಧಾರವಾಡ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ ಹಾಗೂ ಹು-ಧಾ ಮಹಾನಗರ ಪಾಲಿಕೆ ಸದಸ್ಯರಾದ _ಶ್ರೀಮತಿ ರೂಪಾ ಶೆಟ್ಟಿ_ ಅವರು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಚಿಕ್ಕವೀರಯ್ಯನವರ_ ಅವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ರಾಜಣ್ಣ ಮು. ಕೊರವಿ, ಜನಜಾಗೃತಿ ವೇದಿಕೆ ಸದಸ್ಯರಾದ ,ಡಾ. ರಮೇಶ ಮಹಾದೇವಪ್ಪನವರ, ವರದಶ್ರೀ ಫೌಂಡೇಶನ್ ಸಂಸ್ಥಾಪಕರಾದ, ಮಲ್ಲಿಕಾರ್ಜುನ ರಡ್ಡೇರ, ಜಿಲ್ಲಾ ನಿರ್ದೇಶಕರಾದ,ಹನುಮಂತ ನಾಯಕ,ಜನಜಾಗೃತಿ ವೇದಿಕೆ ಸದಸ್ಯರಾದ, ಮಾರುತಿ ಸೇಠ್, ಎಸ್.ಎಸ್. ಪಾಟೀಲ್,ತಾಲೂಕು ಯೋಜನಾಧಿಕಾರಿಗಳು, ಶ್ರೀ ಸೋಮಲಿಂಗ, ವಲಯದ ಮೇಲ್ವಿಚಾರಕ ನಾಗರಾಜ್ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
yallu