ನವಲಗುಂದದಲ್ಲಿ ಅಭಿವೃದ್ಧಿಗೆ ಹೊಸ ಹೆಜ್ಜೆ; ₹50 ಲಕ್ಷದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ದಾಟನಾಳ ಗ್ರಾಮಕ್ಕೆ ಸುಸಜ್ಜಿತ ರಸ್ತೆ ಭಾಗ್ಯ; ಶಾಸಕ ಕೋನರೆಡ್ಡಿಯಿಂದ ಭೂಮಿಪೂಜೆ
ನವಲಗುಂದ:ನವಲಗುಂದ ವಿಧಾನಸಭಾ ಮತಕ್ಷೇತ್ರ–69ರ ವ್ಯಾಪ್ತಿಯ ದಾಟನಾಳ ಗ್ರಾಮಸ್ಥರ ಬಹುದಿನಗಳ ಕನಸಾಗಿದ್ದ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಶಾಸಕ ಎನ್.ಎಚ್. ಕೋನರೆಡ್ಡಿ ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.
ಗ್ರಾಮದ ಮುಖ್ಯ ರಸ್ತೆ ಹಾಳಾಗಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಿ.ಸಿ. ರಸ್ತೆಯ ಕಾಮಗಾರಿಗೆ ಶಾಸಕ ಎನ್.ಎಚ್. ಕೋನರೆಡ್ಡಿ ಭೂಮಿಪೂಜೆ ನೆರವೇರಿಸಿದರು.
ಗ್ರಾಮದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜನರ ಸುಗಮ ಸಂಚಾರಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ನಮ್ಮ ಸಂಕಲ್ಪ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಡಾ. ಆರ್.ಬಿ. ಸಿರಿಯಣ್ಣವರ ಅವರ ನಿಧನಕ್ಕೆ ಮೌನಾಚರಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಲಾಯಿತು.
ಕಾರ್ಯಕ್ರಮದಲ್ಲಿ ಬಸವರಾಜ ನರಗುಂದ, ಹಣಮರಡ್ಡಿ ರದ್ದೆರ, ಹೂವಪ್ಪ ಗುಡಿಸಾಗರ, ಹಣಮಂತ ಹೂಗಾರ, ಮುಸ್ತಾಕ್ ಯಲಿಗಾರ ಸೇರಿದಂತೆ ಹಲವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
yallu