ಹುಬ್ಬಳ್ಳಿ:- ಸಿದ್ಧಾರೂಢರ ಮಠಕ್ಕೆ ಶಾಸಕ ವಿನಯ್ ಕುಲಕರ್ಣಿ ಭೇಟಿ; ಮಳೆ-ಬೆಳೆಗಾಗಿ ವಿಶೇಷ ಪೂಜೆ

ಹುಬ್ಬಳ್ಳಿ:- ಸಿದ್ಧಾರೂಢರ ಮಠಕ್ಕೆ ಶಾಸಕ ವಿನಯ್ ಕುಲಕರ್ಣಿ ಭೇಟಿ; ಮಳೆ-ಬೆಳೆಗಾಗಿ ವಿಶೇಷ ಪೂಜೆ

ಹುಬ್ಬಳ್ಳಿ: ನಗರದ ಶ್ರೀ ಸದ್ಗುರು ಸಿದ್ಧಾರೂಢರ ಮಠಕ್ಕೆ ಶಾಸಕ ವಿನಯ್ ಕುಲಕರ್ಣಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ರಾಜ್ಯದಲ್ಲಿ ಉತ್ತಮ ಮಳೆ-ಬೆಳೆ ಆಗಲಿ, ರೈತರು ಸಮೃದ್ಧಿಯಾಗಲಿ ಹಾಗೂ ನಾಡಿಗೆ ಸುಭಿಕ್ಷೆ ದೊರೆಯಲಿ ಎಂದು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಸನ್ನಿಧಿಯಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದರು.

ಪೂಜೆ ಬಳಿಕ ಶಾಸಕ ವಿನಯ್ ಕುಲಕರ್ಣಿ ಅವರನ್ನು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಅವರನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ, ಮಹಾನಗರ ಪಾಲಿಕೆ ಸದಸ್ಯ ಚೇತನ ಹಿರೇಕೆರೂರ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಆಶೀರ್ವಾದದಿಂದ ನಾಡಿನಲ್ಲಿ ಉತ್ತಮ ಮಳೆ-ಬೆಳೆ ಆಗಿ, ರೈತರು ಹಾಗೂ ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂಬ ಆಶಯದೊಂದಿಗೆ ಪೂಜೆಯನ್ನು ನೆರವೇರಿಸಲಾಯಿತು.