ಧಾರವಾಡ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯಾಗಿ ಘೋಷಿಸಲು ಶಾಸಕ ವಿನಯ್ ಕುಲಕರ್ಣಿ ಮನವಿ
ಧಾರವಾಡ:- ಧಾರವಾಡ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯಾಗಿ ಘೋಷಿಸುವಂತೆ ಆಗ್ರಹಿಸಿ ಧಾರವಾಡ-71 ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರು ಮುಖ್ಯಮಂತ್ರಿ ಡಿ.ಕೆ ಶಿವುಜುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿಯಲ್ಲಿ, ಪ್ರಸಕ್ತ ಮುಂಗಾರು ಮಳೆ ವಾಡಿಕೆಯಂತೆ ಆಗದೇ ಕಡಿಮೆಯಾಗಿರುವ ಪರಿಣಾಮ ರೈತರ ಬೆಳೆಗಳು ಹಾನಿಗೊಳಗಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದರೂ, ಧಾರವಾಡ ಜಿಲ್ಲೆಯ ಯಾವುದೇ ತಾಲೂಕು ಈ ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ. ಧಾರವಾಡ ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ ಮಳೆಯಾಗಿ ಬೆಳೆಗಳು ಹಸಿರಾಗಿ ಕಂಡುಬಂದರೂ, ಬಹುತೇಕ ಪ್ರದೇಶಗಳಲ್ಲಿ ಮಳೆಯ ಕೊರತೆಯಿಂದ ಬೆಳೆಗಳಿಗೆ ಹಾನಿಯಾಗಿದೆ ಎಂದು ಅವರು ಗಮನ ಸೆಳೆದಿದ್ದಾರೆ.
ರೈತರ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ, ರೈತರಿಗೆ ಅಗತ್ಯ ಪರಿಹಾರ ಹಾಗೂ ನೆರವು ನೀಡುವಂತೆ ಶಾಸಕ ವಿನಯ್ ಕುಲಕರ್ಣಿ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ..
yallu