ಸಾಮಾಜಿಕ ಸೇವೆಗೆ ಸಂದ ಗೌರವ: ಸಂತೋಷ ವೇರ್ಣೆಕರ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ

ಸಾಮಾಜಿಕ ಸೇವೆಗೆ ಸಂದ ಗೌರವ: ಸಂತೋಷ ವೇರ್ಣೆಕರ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ

ಹುಬ್ಬಳ್ಳಿ: ಈಶ್ವರಿ ಫೌಂಡೇಶನ್ ಸಂಸ್ಥಾಪಕ ಸಂತೋಷ ವೇರ್ಣೆಕರ ಅವರನ್ನು ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಹುಬ್ಬಳ್ಳಿಯ ಈಶ್ವರಿ ಫೌಂಡೇಶನ್ ಮೂಲಕ ಬಡ ಮಕ್ಕಳು ಹಾಗೂ ಬಡ ಕುಟುಂಬಗಳಿಗೆ ವಿವಿಧ ರೀತಿಯ ಸಹಾಯ-ಸಹಕಾರ ನೀಡುತ್ತಾ, ಹಲವು ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಂತೋಷ ವೇರ್ಣೆಕರ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿಶೇಷವಾಗಿ ಬಡ ಮಕ್ಕಳ ಶಿಕ್ಷಣಕ್ಕೆ ನೆರವು, ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳನ್ನು ಈಶ್ವರಿ ಫೌಂಡೇಶನ್ ಮೂಲಕ ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ.
ಧಾರವಾಡ ಜಿಲ್ಲೆಯಿಂದ ಸಂತೋಷ ವೇರ್ಣೆಕರ ಅವರನ್ನು ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷವಾಗಿದೆ.

ಬೆಂಗಳೂರಿನ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸೆಪ್ಟೆಂಬರ್ 6ರಂದು ಬೆಳಗ್ಗೆ 10.30ಕ್ಕೆ, ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮೂರನೇ ಮಹಡಿಯ ಕುವೆಂಪು ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಈ ಸಂದರ್ಭದಲ್ಲಿ ಸಂತೋಷ ವೇರ್ಣೆಕರ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದೆ.
ಸೇವೆಯ ಮೂಲಕ ಗುರುತಿಸಿಕೊಂಡಿರುವ ಸಂತೋಷ ವೇರ್ಣೆಕರ ಅವರಿಗೆ ದೊರೆತಿರುವ ಈ ಗೌರವಕ್ಕೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಹಿತೈಷಿಗಳು ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.