SKY WORLD ಏವಿಯೇಷನ್ ಅಕಾಡೆಮಿಯಲ್ಲಿ ಸಾಧಕರಿಗೆ ಸನ್ಮಾನ!

SKY WORLD ಏವಿಯೇಷನ್ ಅಕಾಡೆಮಿಯಲ್ಲಿ ಸಾಧಕರಿಗೆ ಸನ್ಮಾನ!

ಬೆಳಗಾವಿ:ಬೆಳಗಾವಿಯ ಸ್ಕೈವಲ್ಡ್ ಏವಿಯೇಷನ್ ಅಕಾಡೆಮಿಯಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇಂದು ನಡೆದ ಕಾರ್ಯಕ್ರಮದಲ್ಲಿ ಸ್ಕೈವಲ್ಡ್ ಏವಿಯೇಷನ್ ಅಕಾಡೆಮಿಯ ಸಂಸ್ಥಾಪಕ ಹಾಗೂ ಸಿಇಒ ವಿನೋದ್ ಬಾಮ್ನೆ ಮತ್ತು ಶ್ರೀ ಸರಸ್ವತಿ ಇನ್ಫೋಟೆಕ್‌ನ ವ್ಯವಸ್ಥಾಪಕ ನಿರ್ದೇಶಕಿ ಜ್ಯೋತಿ ವಿನೋದ್ ಬಾಮ್ನೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳನ್ನು ಆಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವಿಭಾಗದಲ್ಲಿ ಉದ್ಯೋಗಕ್ಕೆ ಆಯ್ಕೆಯಾದ ಭೋಜ್, ಕರ್ನಾಟಕದ ಅನುರಾಧಾ ಕುಂಬಾರ್ ಹಾಗೂ ವಿಜಯಪುರದ ರೆಹಾನ್ ಗಿರಗಾಂವ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿಗಳು, ಸ್ಕೈವಲ್ಡ್ ಅಕಾಡೆಮಿಗೆ ಪ್ರವೇಶ ಪಡೆಯುವ ಮುನ್ನ ತಮಗೆ ಹೆಚ್ಚಿನ ಜ್ಞಾನ ಹಾಗೂ ಆತ್ಮವಿಶ್ವಾಸ ಇರಲಿಲ್ಲ. ಆದರೆ ಅಕಾಡೆಮಿಯಲ್ಲಿ ತರಬೇತಿ ಪಡೆದ ನಂತರ ತಮ್ಮಲ್ಲಿ ಸಾಕಷ್ಟು ಬದಲಾವಣೆ ಹಾಗೂ ಆತ್ಮವಿಶ್ವಾಸ ಮೂಡಿದೆ. ಇಂದು ತಾವು ಸಾಧನೆ ಮಾಡಲು ಸ್ಕೈವಲ್ಡ್ ಅಕಾಡೆಮಿಯ ತರಬೇತಿ ಮತ್ತು ಮಾರ್ಗದರ್ಶನವೇ ಪ್ರಮುಖ ಕಾರಣ ಎಂದು ತಮ್ಮ ಅನುಭವ ಹಂಚಿಕೊಂಡರು.

ವಿದ್ಯಾರ್ಥಿಗಳ ಸಾಧನೆ ಕಂಡು ಪೋಷಕರು ಸಂತಸ ವ್ಯಕ್ತಪಡಿಸಿದರು. ವಿಶೇಷವಾಗಿ ಪ್ರಾದೇಶಿಕ ಮಾಧ್ಯಮದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟದ ವೃತ್ತಿಜೀವನದತ್ತ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಲಾಯಿತು.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವಿಭಾಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ವಿನೋದ್ ಬಾಮ್ನೆ ಅವರು ಸನ್ಮಾನಿಸಿ ಅಭಿನಂದಿಸಿದರು.

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ನಿರಂತರ ಬೆಂಬಲ ಹಾಗೂ ಮಾರ್ಗದರ್ಶನ ನೀಡುತ್ತಿರುವ ವಿನೋದ್ ಬಾಮ್ನೆ ಮತ್ತು ಜ್ಯೋತಿ ವಿನೋದ್ ಬಾಮ್ನೆ ಅವರಿಗೆ ಅಕಾಡೆಮಿ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
ಸಾಕ್ಷಿಯಾಯಿತು.