ಹುಬ್ಬಳ್ಳಿ:-ಇನ್‌ಸ್ಟಾಗ್ರಾಂನಲ್ಲಿ ಕೈಯಲ್ಲಿ ಕತ್ತಿ ಹಿಡಿದು ವಿಡಿಯೋ ಪೋಸ್ಟ್: ವ್ಯಕ್ತಿ ಬಂಧನ
ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ಕತ್ತಿ ಹಿಡಿದುಕೊಂಡು ಭಯದ ವಾತಾವರಣ ಸೃಷ್ಟಿಸಿ, ಅದರ ವಿಡಿಯೋ ಹಾಗೂ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸರು ಬಂಧಿಸಿದ್ದಾರೆ.
ಹಳೇಹುಬ್ಬಳ್ಳಿಯ ಈಶ್ವರನಗರ 4ನೇ ಕ್ರಾಸ್‌ನ ಗಂಗಾಧರ ತಂದೆ ಆನಂದ ಮಡಿವಾಳರ ಎಂಬಾತ ಬಂಧಿತ ಆರೋಪಿ. ಈತ ಸಾರ್ವಜನಿಕ ಸ್ಥಳದಲ್ಲಿ ಕತ್ತಿ ಹಿಡಿದುಕೊಂಡು ಓಡಾಡುತ್ತಿರುವ ವಿಡಿಯೋ ಹಾಗೂ ಚಿತ್ರಗಳನ್ನು “the_jeeva_007” ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.
ಈ ಕುರಿತು ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 77/2026 ದಾಖಲಿಸಲಾಗಿದ್ದು, ಭಾರತೀಯ ಆಯುಧ ಕಾಯ್ದೆ-1959ರ ಕಲಂ 27(1) ಹಾಗೂ ಬಿ.ಎನ್.ಎಸ್.-2023ರ ಕಲಂ 351(2) ಸಹಕಲಂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದು, ಆತನಿಂದ ಒಂದು ಕತ್ತಿಯನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಅಧಿಕಾರಿಯಾದ ಎಎಸ್‌ಐ ಎಸ್.ಜಿ. ವಡ್ಡರ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
yallu