ಕಾಂಗ್ರೆಸ್ ಯುವ ನಾಯಕಿ ವೈಶಾಲಿ ವಿನಯ್ ಕುಲಕರ್ಣಿ ಅವರಿಗೆ ಇಂದು ಜನ್ಮದಿನದ ಸಂಭ್ರಮ
ಕಾಂಗ್ರೆಸ್ ಯುವ ನಾಯಕಿ ವೈಶಾಲಿ ವಿನಯ್ ಕುಲಕರ್ಣಿ ಅವರಿಗೆ ಜನ್ಮದಿನದ ಸಂಭ್ರಮ
ಧಾರವಾಡ: ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಪುತ್ರಿ ಹಾಗೂ ಕಾಂಗ್ರೆಸ್ ಯುವ ನಾಯಕಿ ವೈಶಾಲಿ ವಿನಯ್ ಕುಲಕರ್ಣಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಇಂದು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಶುಭಾಶಯ ಕೋರಿದ್ದಾರೆ.
ವೈಶಾಲಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರ ಸೇರಿದಂತೆ ವಿವಿಧೆಡೆಗಳಿಂದ ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶುಭಾಶಯಗಳನ್ನು ಕೋರಿದರು. ಸಾಮಾಜಿಕ ಜಾಲತಾಣಗಳಲ್ಲಿಯೂ ವೈಶಾಲಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.
ಯುವ ನಾಯಕಿಯಾಗಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವೈಶಾಲಿ ವಿನಯ್ ಕುಲಕರ್ಣಿ ಅವರಿಗೆ ಅಭಿಮಾನಿಗಳು ಉತ್ತಮ ಆರೋಗ್ಯ, ಯಶಸ್ಸು ಹಾಗೂ ರಾಜಕೀಯ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.
yallu