ಕಾಯಕಯೋಗಿ ಶ್ರೀ ನುಲಿಯ ಚಂದಯ್ಯನವರ ಜಯಂತೋತ್ಸವದಲ್ಲಿ ಡಾ. ರಮೇಶ್ ಮಹಾದೇವಪ್ಪನವರ ಭಾಗಿ
ಹುಬ್ಬಳ್ಳಿ: ಕಾಯಕಯೋಗಿ ಶಿವಶರಣ ಶ್ರೀ ನುಲಿಯ ಚಂದಯ್ಯನವರ 919ನೇ ಜಯಂತೋತ್ಸವದ ಪವಿತ್ರ ಹಾಗೂ ಸ್ಮರಣೀಯ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಸಮಾಜದ ಹಿರಿಯರು ಹಾಗೂ ಗಣ್ಯರ ವತಿಯಿಂದ ಡಾ. ರಮೇಶ್ ಮಹಾದೇವಪ್ಪನವರ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಅವರು, ಈ ಕ್ಷಣಗಳು ತಮ್ಮ ಜೀವನದ ಅತ್ಯಂತ ಸಂತಸದ ಹಾಗೂ ಸ್ಮರಣೀಯ ಕ್ಷಣಗಳಾಗಿವೆ ಎಂದು ಹರ್ಷ ವ್ಯಕ್ತಪಡಿಸಿದರು.
ಕಾಯಕ, ದಾಸೋಹ ಹಾಗೂ ಸಮಾನತೆಯ ಸಂದೇಶವನ್ನು ಸಮಾಜಕ್ಕೆ ಸಾರಿದ ಮಹಾನ್ ಶಿವಶರಣ ಶ್ರೀ ನುಲಿಯ ಚಂದಯ್ಯನವರ ಆದರ್ಶಗಳು ಸದಾ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ ಎಂದು ಡಾ. ರಮೇಶ್ ಮಹಾದೇವಪ್ಪನವರ ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಸಮಾಜದ ಹಿರಿಯರು, ಗಣ್ಯರು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
yallu