ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಿಗೆ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಅಭಿನಂದನೆ
ಧಾರವಾಡ: ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸದಾನಂದ ಡಂಗನವರ ಹಾಗೂ ಚಂದ್ರಶೇಖರ ಜುಟ್ಟಲ್ ಅವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅಭಿನಂದನೆ ಸಲ್ಲಿಸಿದ್ದಾರೆ.
ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕುಂದಗೋಳದ ಚಂದ್ರಶೇಖರ ಜುಟ್ಟಲ್ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸದಾನಂದ ಡಂಗನವರ ಅವರನ್ನು ನೇಮಕ ಮಾಡಲಾಗಿದೆ.
ನೂತನ ಜಿಲ್ಲಾಧ್ಯಕ್ಷರು ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದ್ದು, ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬುತ್ತಾರೆ ಎಂಬ ವಿಶ್ವಾಸವಿದೆ ಎಂದು ಗೌರಮ್ಮಾ ಬಲೋಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವರ ನೇತೃತ್ವದಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಸದೃಢವಾಗಿ, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.
yallu