ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ರಾಬರ್ಟ್ ದದ್ದಾಪುರಿಗೆ ಸನ್ಮಾನ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಬರ್ಟ್ ದದ್ದಾಪುರಿ ಅವರನ್ನು ಡಾ. ಎಲ್. ಬೂದಿಹಾಳ ಅವರ ನೇತೃತ್ವದಲ್ಲಿ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಉತ್ತಮ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಪ್ರಾಧಿಕಾರದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲಿ ಎಂದು ಶುಭ ಹಾರೈಸಲಾಯಿತು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡೆ ರಾಜೇಶ್ವರಿ ಕಿರೇಸೂರ ಸೇರಿದಂತೆ ಗಣ್ಯರು ಹಾಗೂ ಇತರರು ಉಪಸ್ಥಿತರಿದ್ದರು.
yallu