ಇಕ್ವಿಟಾಸ್ ಬ್ಯಾಂಕ್ 10ನೇ ವಾರ್ಷಿಕೋತ್ಸವ: ಡಾ. ರಮೇಶ್ ಮಹಾದೇವಪ್ಪನವರಿಂದ ಉದ್ಘಾಟನೆ
ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್‌ನಲ್ಲಿರುವ ಇಕ್ವಿಟಾಸ್ ಬ್ಯಾಂಕ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಬ್ಯಾಂಕಿನಲ್ಲಿ ನೂತನವಾಗಿ ಪ್ರಾರಂಭಿಸಲಾದ ಎಟಿಎಂ ಯಂತ್ರಕ್ಕೆ ಚಾಲನೆ ನೀಡಿದರು.
ಬಳಿಕ ಬ್ಯಾಂಕಿನ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ವತಿಯಿಂದ ಡಾ. ರಮೇಶ್ ಮಹಾದೇವಪ್ಪನವರ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀಮತಿ ವೈಲೆಟ್ ವೆಲಂಗಣಿ, ಶ್ರೀಮತಿ ಶಶಿಕಲಾ ವಾಲಿಕಾರ್, ಶ್ರೀ ಅಕ್ಷಯ್ ಮಾನೆ, ಶ್ರೀ ವಿಜಯ ಪೂಜಾರ್ ಸೇರಿದಂತೆ ಬ್ಯಾಂಕಿನ ಸಿಬ್ಬಂದಿ ವರ್ಗದವರು ಹಾಗೂ ಆತ್ಮೀಯ ಗ್ರಾಹಕರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮೆರುಗು ತಂದರು.
yallu