ಎಸ್‌ಎಸ್‌ಕೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ: ವಿದ್ಯಾರ್ಥಿ ಜೀವನ ಸುವರ್ಣಾವಕಾಶ: ಎಂಎಲ್‌ಸಿ ಪ್ರದೀಪ್ ಶೆಟ್ಟರ್
ಎಸ್‌ಎಸ್‌ಕೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
ವಿದ್ಯಾರ್ಥಿ ಜೀವನ ಸುವರ್ಣಾವಕಾಶ: ಎಂಎಲ್‌ಸಿ ಪ್ರದೀಪ್ ಶೆಟ್ಟರ್!
ಹುಬ್ಬಳ್ಳಿ: ನಗರದ ಎಸ್‌ಎಸ್‌ಕೆ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ಪ್ರಥಮ ವರ್ಷದ ಬಿಎ ಹಾಗೂ ಬಿಕಾಂ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರದೀಪ್ ಶೆಟ್ಟರ್ ಅವರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.
ವಿದ್ಯಾರ್ಥಿ ಜೀವನ ಸುವರ್ಣಾವಕಾಶದ ಅವಧಿಯಾಗಿದ್ದು, ಈ ಸಮಯವನ್ನು ಉತ್ತಮ ಅಧ್ಯಯನಕ್ಕೆ ಬಳಸಿಕೊಂಡು ಸಾಧನೆಯತ್ತ ಮುನ್ನಡೆಯಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನವೂ ಉತ್ತಮವಾಗಿರಲಿ ಎಂದು ಅವರು ಹಾರೈಸಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಸಕರ ಅನುದಾನದಿಂದ 5 ಲಕ್ಷ ರೂಪಾಯಿ ಅನುದಾನ ನೀಡಿರುವುದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಕೆ ಸಮಾಜದ ಪಂಚ ಕಮಿಟಿ ಅಧ್ಯಕ್ಷ ಸತೀಶ್ ಮೆಹರವಾಡೆ, ಹುಡಾ ಅಧ್ಯಕ್ಷ ರಾಬರ್ಟ್ ದದ್ದಾಪುರಿ, ನೀಲಕಂಠಸಾ ಜಡಿ, ಎಸ್‌ಎಸ್‌ಕೆ ಕಾಲೇಜಿನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
yallu