ಮಹಿಳಾ ಸಬಲೀಕರಣಕ್ಕೆ ಆವಿಷ್ಕಾರ್ ಉತ್ಸವದ ವೇದಿಕೆ – ದೇವಕಿ ಯೋಗಾನಂದ ಚಾಲನೆ
ಬೆಳಗಾವಿ: ಮಹಿಳಾ ಸಬಲೀಕರಣ, ಸ್ವಾವಲಂಬನೆ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಬೆಳಗಾವಿಯ ಮರಾಠಾ ಮಂದಿರ ಕಾರ್ಯಾಲಯದಲ್ಲಿ ಆಯೋಜಿಸಲಾದ ಆವಿಷ್ಕಾರ್ ಉತ್ಸವ 2026 ಕಾರ್ಯಕ್ರಮವನ್ನು ಹುಬ್ಬಳ್ಳಿಯ ಉದ್ಯಮಿ ಹಾಗೂ ಸಮಾಜ ಸೇವಕಿ ಜಿ. ದೇವಕಿ ಯೋಗಾನಂದ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಮಹಿಳೆಯರ ಪ್ರತಿಭೆ, ಕೌಶಲ್ಯ ಹಾಗೂ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಉತ್ಸವವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಜಿ. ದೇವಕಿ ಯೋಗಾನಂದ ಅವರು, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವುದರ ಜೊತೆಗೆ ಸಮಾಜದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಳ್ಳಲು ಇಂತಹ ವೇದಿಕೆಗಳು ಅತ್ಯಂತ ಅವಶ್ಯಕವಾಗಿವೆ ಎಂದು ಅಭಿಪ್ರಾಯಪಟ್ಟರು.
ಮಹಿಳೆಯರಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ಅವಕಾಶಗಳನ್ನು ಕಲ್ಪಿಸುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರೋತ್ಸಾಹಿಸಬೇಕು. ಇಂತಹ ಉತ್ಸವಗಳು ಮಹಿಳೆಯರಿಗೆ ತಮ್ಮ ಕೌಶಲ್ಯ ಪ್ರದರ್ಶಿಸಲು ಹಾಗೂ ಉದ್ಯಮಶೀಲತೆಯತ್ತ ಹೆಜ್ಜೆ ಇಡಲು ಉತ್ತಮ ಅವಕಾಶ ಕಲ್ಪಿಸುತ್ತವೆ ಎಂದು ತಿಳಿಸಿದರು.
ಮಹಿಳೆಯರ ಸಾಧನೆ, ಸ್ವಾವಲಂಬನೆ ಹಾಗೂ ಸಬಲೀಕರಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆವಿಷ್ಕಾರ್ ಉತ್ಸವ 2026 ಮಹತ್ವದ ವೇದಿಕೆಯಾಗಿ ಮೂಡಿಬಂದಿತು.
ಈ ಸಂದರ್ಭದಲ್ಲಿ ಸ್ಟಾಲನಲ್ಲಿ ವಿಶೇಷ ಉಡುಗೆ ತೊಡಗೆಗಳು ಸೇರಿದಂತೆ ಇತರ ವಸ್ತುಗಳನ್ನು ಪ್ರದರ್ಶನ ಜೊತೆಗೆ ಮಾರಾಟ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ರೋಹಣಿ ಗೊಪ್ಟೆ, ಅಧ್ಯಕ್ಷರು ಶೀಥಲ್, ಲಕ್ಷ್ಮಿ''ಸೇರಿದಂತೆ ಇತರರು ಉಪಸ್ಥಿತರಿದ್ದರು.
yallu