ಪೈಪ್‌ಲೈನ್ ಒಡೆದು ನೀರು ಸೋರಿಕೆ ತಡೆಗೆ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಸೂಚನೆಗೆ ಅಧಿಕಾರಿಗಳು ತಕ್ಷಣವೇ ಸ್ಪಂದನೆ!

ಪೈಪ್‌ಲೈನ್ ಒಡೆದು ನೀರು ಸೋರಿಕೆ ತಡೆಗೆ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಸೂಚನೆಗೆ ಅಧಿಕಾರಿಗಳು ತಕ್ಷಣವೇ ಸ್ಪಂದನೆ!

ಪೈಪ್‌ಲೈನ್ ಒಡೆದು ನೀರು ಸೋರಿಕೆ ತಡೆಗೆ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಸೂಚನೆಗೆ ಅಧಿಕಾರಿಗಳು ತಕ್ಷಣವೇ ಸ್ಪಂದನೆ!

ಧಾರವಾಡ: ನಗರದ 5ನೇ ವಾರ್ಡ್‌ನ ಮದಿಹಾಳ ಮುಖ್ಯ ರಸ್ತೆಯಲ್ಲಿ ಎಲ್ ಆ್ಯಂಡ್ ಟಿ ಕಂಪನಿ ಕೈಗೊಂಡಿರುವ ಪೈಪ್‌ಲೈನ್ ಕಾಮಗಾರಿ ಯಲ್ಲಿ  ಹಲವೆಡೆ ಪೈಪ್‌ಗಳು ಒಡೆದು ಕುಡಿಯುವ ನೀರು ಸೋರಿಕೆಯಾಗುತ್ತಿರುವ ಘಟನೆ ಬೆಳಕಿಗೆ ಬಂದಿತ್ತು.

ಈ ಸಮಸ್ಯೆಯನ್ನು ಸ್ಥಳೀಯರು ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರ ಗಮನಕ್ಕೆ ತಂದಿದ್ದಾರೆ. ತಕ್ಷಣವೇ ಸ್ಪಂದಿಸಿದ ಗೌರಮ್ಮಾ ಬಲೋಗಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆಯ ಕುರಿತು ಮಾಹಿತಿ ನೀಡಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ, ನೀರು ಸೋರಿಕೆಯಾಗುತ್ತಿದ್ದ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ಇದರಿಂದ ಕುಡಿಯುವ ನೀರು ಮತ್ತಷ್ಟು ಪೋಲಾಗುವುದನ್ನು ತಪ್ಪಿಸಿದಂತಾಗಿದೆ.