ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ ಸಂಸದ ಜಗದೀಶ್ ಶೆಟ್ಟರ್
ರಾಜಭವನದಲ್ಲಿ ಕರ್ನಾಟಕದ ನೂತನ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರನ್ನು ಭೇಟಿಯಾದ ಸಂಸದ ಜಗದೀಶ್ ಶೆಟ್ಟರ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಇಂದು ಬೆಂಗಳೂರಿನ ರಾಜಭವನದಲ್ಲಿ ಕರ್ನಾಟಕದ ನೂತನ ರಾಜ್ಯಪಾಲರಾದ ಗೌರವಾನ್ವಿತ ಡಾ. ಸುಧಾ ಯಾದವ್ ಅವರನ್ನು ಭೇಟಿಯಾಗಿ, ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ನೂತನ ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದ ಸಂಸದ ಜಗದೀಶ್ ಶೆಟ್ಟರ್ ಅವರು, ರಾಜ್ಯದ ಅಭಿವೃದ್ಧಿ ಹಾಗೂ ಜನಹಿತದ ಕಾರ್ಯಗಳಿಗೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಅವರ ಧರ್ಮಪತ್ನಿ ಶಿಲ್ಪಾ ಶೆಟ್ಟರ್ ಇದ್ದರು.
yallu