ಪೊಲೀಸರ ಕಣ್ಣು ತಪ್ಪಿಸಿ ಎಸ್ಕೇಪ್ ಆಗಿತ್ತಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲು

Hubli dharwad

ಪೊಲೀಸರ ಕಣ್ಣು ತಪ್ಪಿಸಿ ಎಸ್ಕೇಪ್ ಆಗಿತ್ತಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿಯಲ್ಲಿ ಅನುಮಾನಾಸ್ಪದವಾಗಿ ಸತ್ತ ಎತ್ತನ್ನು ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರ ತಪಾಸಣೆಗೆ ವಾಹನ ನಿಲ್ಲಿಸದೇ ವೇಗವಾಗಿ ತೆರಳಿದ ಗೂಡ್ಸ್ ವಾಹನವನ್ನು ಬೆನ್ನಟ್ಟಿದ ಪೊಲೀಸರು, ಬಂಕಾಪೂರ ಚೌಕ್ ಬಳಿ ಹಿಡಿದು ಪರಿಶೀಲನೆ ನಡೆಸಿದಾಗ ಪ್ರಕರಣ ಬಹಿರಂಗವಾಗಿದೆ.
ಈ ಸಂಬಂಧ ಇಬ್ಬರ ವಿರುದ್ಧ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೌದು... ಹುಬ್ಬಳ್ಳಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸತ್ತ ಎತ್ತನ್ನು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಬೆಳಗಾವಿ ಮೂಲದ ಬಾಬಾಜಾನ ಕುಂಡವಾಲೆ ಹಾಗೂ ಯಾಸೀನ್ ತಾಳಿಕೋಟಿ ವಿರುದ್ಧ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಬ್ಟ್ಬೂರ ಸರ್ಕಲ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಗೂಡ್ಸ್ ವಾಹನವನ್ನು ನಿಲ್ಲಿಸಲು ಸೂಚನೆ ನೀಡಿದ್ದರು.
ಆದರೆ ಚಾಲಕ ವಾಹನ ನಿಲ್ಲಿಸದೇ ವೇಗವಾಗಿ ಓಡಿಸಿಕೊಂಡು ಹೋಗಿದ್ದರಿಂದ ಪೊಲೀಸರಿಗೆ ಅನುಮಾನ ಮೂಡಿತ್ತು.

ತಕ್ಷಣವೇ ವಾಹನವನ್ನು ಬೆನ್ನಟ್ಟಿದ ಪೊಲೀಸರು, ಬಂಕಾಪೂರ ಚೌಕ್ ಹತ್ತಿರ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ವಾಹನದಲ್ಲಿ ಸತ್ತಿರುವ ಸ್ಥಿತಿಯಲ್ಲಿದ್ದ ಎತ್ತು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಪರಿಶೀಲನೆ ವೇಳೆ ವಾಹನದಲ್ಲಿದ್ದ ವ್ಯಕ್ತಿಗಳು ಸಮರ್ಪಕ ಉತ್ತರ ನೀಡದೇ ಅನುಮಾನಾಸ್ಪದವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಘಟನೆಯ ಕುರಿತು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎತ್ತು ಸಾವಿನ ನಿಖರ ಕಾರಣ ಹಾಗೂ ಸಾಗಣೆ ಉದ್ದೇಶದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.