ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ನೇತೃತ್ವದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿ ಪ್ರಸಾದ್ ಅವರಿಗೆ ಅಭಿನಂದನೆ ಜೊತೆಗೆ ಶುಭಾಶಯ

ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ನೇತೃತ್ವದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿ ಪ್ರಸಾದ್ ಅವರಿಗೆ ಅಭಿನಂದನೆ ಜೊತೆಗೆ ಶುಭಾಶಯ

ಬೆಂಗಳೂರು:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದಲ್ಲಿ ಹುಬ್ಬಳ್ಳಿ–ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರು ಭಾಗವಹಿಸಿ ಶುಭಾಶಯ ಕೋರಿದರು.

ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ಪಕ್ಷವು ಇನ್ನಷ್ಟು ಬಲಿಷ್ಠವಾಗಲಿ ಹಾಗೂ ಸಂಘಟನಾ ಚಟುವಟಿಕೆಗಳು ರಾಜ್ಯಾದ್ಯಂತ ಮತ್ತಷ್ಟು ಚುರುಕುಗೊಳ್ಳಲಿ ಎಂದು ಶುಭ ಹಾರೈಸಿದರು.

ಬಳಿಕ ಮಹಿಳಾ ಘಟಕದ ರಾಜಾದ್ಯಕ್ಷೆ ಸೌಮ್ಯ ರೆಡ್ಡಿ ಅವರನ್ನ ಭೇಟಿ ಮಾಡಿ ಸಂಘಟನೆ ಕುರಿತು ಮಾಹಿತಿಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸ್ನೇಹಾ ಜಾದವ್, ಬಾಳಮ್ಮ, ಸೇರಿದಂತೆ ಪಕ್ಷದ ವಿವಿಧ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.