ಜನಸೇವೆಗೆ ಸಿಕ್ಕ ಗೌರವ – ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಯುವ ಮುಖಂಡ ಸಂತೋಷ ಚಲವಾದಿ
ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಯುವ ಮುಖಂಡ ಸಂತೋಷ ಜಿ. ಛಲವಾದಿ ಅವರನ್ನು ನೇಮಕ ಮಾಡಲಾಗಿದೆ. ವಾರ್ಡ್ ಸಂಖ್ಯೆ 58ರಲ್ಲಿ ಜನಪರ ಅಭಿವೃದ್ಧಿ ಕಾರ್ಯಗಳು, ಪಕ್ಷದ ಮೇಲಿನ ನಿಷ್ಠೆ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ. ಈ ನೇಮಕಾತಿಯಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷದ ವಾತಾವರಣ ನಿರ್ಮಾಣವಾಗಿದೆ.
ಹೌದು... ಕಾಂಗ್ರೆಸ್ ಯುವ ಮುಖಂಡ ಸಂತೋಷ ಗುರಪ್ಪ ಛಲವಾದಿ ಅವರು ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವ ಜೊತೆಗೆ ವಾರ್ಡ್ ಸಂಖ್ಯೆ 58ರಲ್ಲಿ ಜನಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರ ಧರ್ಮಪತ್ನಿ ಹಾಗೂ ಮಹಾನಗರ ಪಾಲಿಕೆ ಸದಸ್ಯೆ ಶೃತಿ ಛಲವಾದಿ ಅವರೊಂದಿಗೆ ಸೇರಿ ವಾರ್ಡ್ನಲ್ಲಿ ರಸ್ತೆ, ಸ್ವಚ್ಛತೆ, ಕುಡಿಯುವ ನೀರು, ಮೂಲಸೌಕರ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಅವರ ನಿಷ್ಠಾವಂತ ಸೇವೆ, ಪಕ್ಷದ ಮೇಲಿನ ಬದ್ಧತೆ ಹಾಗೂ ಸಂಘಟನಾ ಸಾಮರ್ಥ್ಯವನ್ನು ಪರಿಗಣಿಸಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಆದೇಶದ ಮೇರೆಗೆ ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಜಿ. ಛಲವಾದಿ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ್ ಹುಸೇನ್ ಹಳ್ಳೂರ ಅವರು ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದು, ಪಕ್ಷದ ಸಂಘಟನೆ ಬಲಪಡಿಸುವುದು, ಕಾಂಗ್ರೆಸ್ನ ಸಿದ್ಧಾಂತ ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು ಮತ್ತು ಪಕ್ಷದ ಚಟುವಟಿಕೆಗಳಲ್ಲಿ ಇನ್ನಷ್ಟು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಇನ್ನು ಸಂತೋಷ ಛಲವಾದಿ ಅವರ ನೇಮಕಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ. ನೂತನ ಜವಾಬ್ದಾರಿಯನ್ನು ಅವರು ಸಮರ್ಥವಾಗಿ ನಿಭಾಯಿಸಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಶೇಷವಾಗಿ ವಾರ್ಡ್ ಸಂಖ್ಯೆ 58ರ ನಿವಾಸಿಗಳು, ಛಲವಾದಿ ಕುಟುಂಬದ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿ, "ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ನಾಯಕತ್ವ ಸಂತೋಷ ಛಲವಾದಿ ಅವರದ್ದು" ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಾರ್ಡ್ನ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಇನ್ನೊಂದು ವಿಶೇಷ ಸಂಗತಿಯೆಂದರೆ, ಈ ಹಿಂದೆ ವಾರ್ಡ್ನ ವಿವಿಧ ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಎಲ್ಲ ಸಮಾಜದ ಮುಖಂಡರು ಹಾಗೂ ಯುವಕರನ್ನು ಒಗ್ಗೂಡಿಸಿ ಒಂದೇ ಸ್ಥಳದಲ್ಲಿ ಏಕತಾ ಗಣೇಶೋತ್ಸವ ಆಚರಿಸುವ ಪರಂಪರೆ ಬೆಳೆಸಲಾಗಿದೆ. ಈ ಒಗ್ಗಟ್ಟಿನ ಪ್ರಯತ್ನಕ್ಕೆ ಸಂತೋಷ ಛಲವಾದಿ ಹಾಗೂ ಅವರ ಕುಟುಂಬದ ಪಾತ್ರ ಮಹತ್ವದ್ದಾಗಿದೆ ಎಂದು ಸಾರ್ವಜನಿಕರು ಶ್ಲಾಘಿಸಿದ್ದಾರೆ.
ಈ ನೇಮಕದ ಹಿನ್ನೆಲೆಯಲ್ಲಿ ಸರ್ವಧರ್ಮ ಸೇವಾ ಸಮಿತಿ, ರಾಮನಗರ, ಜೆಎಸ್ಸಿಎಲ್ ಕ್ಲಬ್, ಹುಬ್ಬಳ್ಳಿ, ಉತ್ತರ ಕರ್ನಾಟಕ ಛಲವಾದಿ ಮಹಾಸಭಾ, ಶ್ರೀ ಶಿವಗಣೇಶ ಮಂದಿರ ಸೇವಾ ಸಮಿತಿ, ಉದಯನಗರ, ಕೇಶ್ವಾಪುರ ಜೈನ ಯುವ ಸಂಘಟನೆ ಸೇರಿದಂತೆ ವಾರ್ಡ್ 58ರ ವಿವಿಧ ಸಂಘ-ಸಂಸ್ಥೆಗಳು ಹಾಗೂ ಸರ್ವಜನಾಂಗದ ಮುಖಂಡರು ಸಂತೋಷ ಛಲವಾದಿ ಅವರಿಗೆ ಅಭಿನಂದನೆ ಸಲ್ಲಿಸಿ, ನೂತನ ಜವಾಬ್ದಾರಿಯಲ್ಲಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.
ಇನ್ನೂ ಜನಸೇವೆ, ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆಗೆ ಸಲ್ಲಿಸಿದ ಸೇವೆಗೆ ಸಂದ ಈ ಗೌರವವು ಸಂತೋಷ ಜಿ. ಛಲವಾದಿ ಅವರ ರಾಜಕೀಯ ಬದುಕಿನಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದು ವಿಶೇಷ... !
ಜನಸೇವೆಗೆ ಸಿಕ್ಕ ಗೌರವ – ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಛಲವಾದಿ
ಕಾಂಗ್ರೆಸ್ ಸಂಘಟನೆಗೆ ಹೊಸ ಶಕ್ತಿ – ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಛಲವಾದಿ
ಯುವ ನಾಯಕನಿಗೆ ಕಾಂಗ್ರೆಸ್ನಲ್ಲಿ ಉನ್ನತ ಜವಾಬ್ದಾರಿ – ಸಂತೋಷ ಛಲವಾದಿ ನೇಮಕ
yallu