ಆರೋಗ್ಯ ಸಮಾಜ ಕಟ್ಟುವುದಕ್ಕೆ ಯೋಗ ಬಹಳ ಮುಖ್ಯ'' ಶ್ರೀಮತಿ ಶಿಲ್ಪಾ ಶೆಟ್ಟರ್

ಆರೋಗ್ಯ ಸಮಾಜ ಕಟ್ಟುವುದಕ್ಕೆ ಯೋಗ ಬಹಳ ಮುಖ್ಯ'' ಶ್ರೀಮತಿ ಶಿಲ್ಪಾ ಶೆಟ್ಟರ್

ಹುಬ್ಬಳ್ಳಿ:- ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ, ಜಗದೀಶ್ ಶೆಟ್ಟರ್ ಅವರ ಧರ್ಮಪತ್ನಿ ಶ್ರೀಮತಿ ಶಿಲ್ಪಾ ಶೆಟ್ಟರ್ ಅವರು ತಮ್ಮ ನಿವಾಸದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಆರೋಗ್ಯದ ಮಹತ್ವ ಮತ್ತು ಯೋಗದ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ದಿನನಿತ್ಯದ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವುದರ ಜೊತೆಗೆ, ಒತ್ತಡ ನಿವಾರಣೆ, ಏಕಾಗ್ರತೆ ವೃದ್ಧಿ ಹಾಗೂ ಶಾಂತಿಯುತ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

"ಯೋಗವು ವ್ಯಕ್ತಿಯ ಆರೋಗ್ಯವನ್ನು ಸುಧಾರಿಸುವುದಷ್ಟೇ ಅಲ್ಲ, ಆರೋಗ್ಯವಂತ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೂ ಮಹತ್ತರ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬರೂ ಯೋಗಾಭ್ಯಾಸವನ್ನು ತಮ್ಮ ದಿನಚರಿಯ ಭಾಗವನ್ನಾಗಿ ಮಾಡಿಕೊಳ್ಳಬೇಕು" ಎಂದು ಅವರು ಕರೆ ನೀಡಿದರು.