ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ರಮೇಶ್ ಹಾಗೂ ಗೀತಾ ರಮೇಶ್ ಕಿವಿಮಾತು
ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ‘ವಿಕೆ ಓದು’ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ರಮೇಶ್ ಹಾಗೂ ಗೀತಾ ರಮೇಶ್ ಕಿವಿಮಾತು
ಹುಬ್ಬಳ್ಳಿ: ಗೋಪನಕೊಪ್ಪದ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ವಿದ್ಯಾರ್ಥಿಗಳಲ್ಲಿ ಪತ್ರಿಕೆ ಓದುವ ಅಭ್ಯಾಸ ಬೆಳೆಸುವ ಉದ್ದೇಶದಿಂದ ‘ವಿಕೆ ಓದು’ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜಸೇವಕರಾದ ಡಾ. ರಮೇಶ್ ಮಹಾದೇವಪ್ಪನವರ ಹಾಗೂ ಶ್ರೀಮತಿ ಗೀತಾ ರಮೇಶ್ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪತ್ರಿಕೆ ಓದುವ ಮಹತ್ವ, ಸಾಮಾನ್ಯ ಜ್ಞಾನ ವೃದ್ಧಿ ಹಾಗೂ ಸಮಕಾಲೀನ ವಿದ್ಯಮಾನಗಳ ಅರಿವಿನ ಬಗ್ಗೆ ವಿಶೇಷ ಸಲಹೆ ನೀಡಿದರು.
ಈ ವೇಳೆ ವಿದ್ಯಾರ್ಥಿಗಳಿಗೆ ವಿಜಯ ಕರ್ನಾಟಕ ಪತ್ರಿಕೆಗಳನ್ನು ವಿತರಿಸಿ, ಪ್ರತಿದಿನ ಪತ್ರಿಕೆ ಓದುವ ಮೂಲಕ ಭಾಷಾ ಕೌಶಲ್ಯ, ಚಿಂತನಾ ಶಕ್ತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ನೆರವಾಗುವಂತೆ ಪ್ರೇರೇಪಿಸಿದರು.
ವಿಜಯ್ ಕರ್ನಾಟಕ ಪತ್ರಿಕರಯ ಸ್ಥಾನಿಕ ಸಂಪಾದಕರಾದ ಬಂಡು ಕುಲಕರ್ಣಿ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪತ್ರಿಕೆ ಓದುವ ಸಂಕಲ್ಪ ಮಾಡಿದರು.
yallu