ಶ್ರೀ ಗಣೇಶ್ ಹೋಟೆಲ್‌ಗೆ ಪಾಲಿಕೆ ನೋಟಿಸ್..! ಅಕ್ರಮ ಕಟ್ಟಡದ ವಿರುದ್ಧ ಕ್ರಮ ಯಾವಾಗ?"
ಹುಬ್ಬಳ್ಳಿಯ ದೇಶಾಯಿ ಕ್ರಾಸ್‌ನಲ್ಲಿರುವ ಶ್ರೀ ಗಣೇಶ್ ಹೋಟೆಲ್‌ಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕೃತ ನೋಟಿಸ್ ಜಾರಿ ಮಾಡಿದೆ.
ಮಹಾನಗರ ಪಾಲಿಕೆ ಆಯುಕ್ತರ ಆದೇಶದ ಮೇರೆಗೆ ನೀಡಲಾದ ನೋಟಿಸ್‌ನಲ್ಲಿ, ಕಟ್ಟಡ ನಿರ್ಮಾಣದಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿರುವುದು ಹಾಗೂ ಈ ಹಿಂದೆ ನೀಡಿದ್ದ ನೋಟಿಸ್‌ಗಳಿಗೆ ಸಮರ್ಪಕ ಉತ್ತರ ನೀಡದಿರುವುದನ್ನು ಉಲ್ಲೇಖಿಸಲಾಗಿದೆ.
ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆ, 1976ರ ಕಲಂ 321ರ ಅನ್ವಯ, ನಿಗದಿತ ಅವಧಿಯೊಳಗೆ ಉಲ್ಲಂಘನೆಗಳನ್ನು ತೆರವುಗೊಳಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಆದೇಶ ಪಾಲಿಸದಿದ್ದರೆ ಮಹಾನಗರ ಪಾಲಿಕೆಯೇ ಕ್ರಮ ಕೈಗೊಂಡು, ಅದರ ವೆಚ್ಚವನ್ನು ಸಂಬಂಧಪಟ್ಟವರಿಂದಲೇ ವಸೂಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಆದರೆ, ನೋಟಿಸ್ ಜಾರಿಯಾಗಿ ಸಾಕಷ್ಟು ಸಮಯ ಕಳೆದರೂ ಕಟ್ಟಡ ತೆರವುಗೊಳಿಸದಿರುವುದು ಸಾರ್ವಜನಿಕರ ಪ್ರಶ್ನೆಗೆ ಕಾರಣವಾಗಿದೆ. ಸಣ್ಣ ವ್ಯಾಪಾರಿಗಳು ಮತ್ತು ಬಡವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವ ಮಹಾನಗರ ಪಾಲಿಕೆ, ದೊಡ್ಡ ಹೋಟೆಲ್‌ಗಳ ವಿಚಾರದಲ್ಲಿ ಮಾತ್ರ ವಿಳಂಬ ಮಾಡುತ್ತಿರುವುದು ಯಾಕೆ ಎಂಬ ಪ್ರಶ್ನೆ ಕೇಳಿಬರುತ್ತಿದೆ.
"ಬಡವರಿಗೊಂದು ನ್ಯಾಯ, ಶ್ರೀಮಂತರಿಗೊಂದು ನ್ಯಾಯವೇ?" ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ನಿಯಮ ಉಲ್ಲಂಘನೆ ಮಾಡಿರುವವರ ವಿರುದ್ಧ ಯಾವುದೇ ತಾರತಮ್ಯವಿಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಗೆ ಒತ್ತಾಯಿಸಿದ್ದಾರೆ.
ಈ ಪ್ರಕರಣದಲ್ಲಿ ಪಾಲಿಕೆ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಕಾದು ನೋಡಬೇಕಿದೆ.
ವರದಿ ರಾಜು ಮುದ್ಗಲ್ ಹುಬ್ಬಳ್ಳಿ
yallu