ಧಾರವಾಡ:'ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ದೊರಕಲಿ: ಅರವಿಂದ ಏಗನಗೌಡ್ರ

ಧಾರವಾಡ:'ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ದೊರಕಲಿ: ಅರವಿಂದ ಏಗನಗೌಡ್ರ

ಧಾರವಾಡ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಯನ್ನು ತಲುಪಬೇಕು ಎಂಬುದು ನಮ್ಮ ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ, ಧಾರವಾಡ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಗ್ಯಾರಂಟಿ ಅನುಷ್ಠಾನ ಸಮಿತಿ ಬದ್ಧವಾಗಿದೆ ಎಂದು ಸಮಿತಿಯ ಅಧ್ಯಕ್ಷರಾದ ಅರವಿಂದ ಏಗನಗೌಡರ ಅವರು ತಿಳಿಸಿದ್ದಾರೆ.

ಈ ಕುರಿತು ಸಾರ್ವಜನಿಕರಿಗೆ ನೀಡಿರುವ ಪ್ರಮುಖ ಮಾರ್ಗಸೂಚಿಗಳು ಮತ್ತು ಸ್ಪಷ್ಟನೆಗಳು ಇಲ್ಲಿವೆ, ಫಲಾನುಭವಿಗಳ ಕುರಿತು ಕಟ್ಟುನಿಟ್ಟಿನ ಸೂಚನೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಮೃತಪಟ್ಟಿದ್ದಲ್ಲಿ. ಕುಟುಂಬಸ್ಥರು ನೈತಿಕ ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕು. ಮರಣದ ನಂತರವೂ ಫಲಾನುಭವಿಯತೆ ಖಾತೆಗೆ ಜಮೆಯಾಗುವ ಹಣವನ್ನು ಸರ್ಕಾರಕ್ಕೆ ಮರುಪಾವತಿಸುವುದು ಕಡ್ಡಾಯವಾಗಿದೆ. ಮರಣ ಪ್ರಮಾಣಪತ್ರವನ್ನು ಸಲ್ಲಿಸಿ, ಯೋಜನೆ ಸ್ಥಗಿತಗೊಳಿಸುವಂತೆ ಕೋರಬೇಕು. ಅನರ್ಹರು ಹಣ ಪಡೆಯುವುದನ್ನು ತಡೆಯಲು ಸಮಿತಿಯು ಕಠಿಣ ನಿಗಾ ವಹಿಸಿದೆ. ವದಂತಿಗಳಿಗೆ ಆಸ್ಪದವಿಲ್ಲ: ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುವುದು ಎಂಬ ವದಂತಿಗಳು ಸತ್ಯಕ್ಕೆ ದೂರವಾದವು. ಅರ್ಹರಿಗೆ ನಿರಂತರವಾಗಿ ಸವಲತ್ತು ತಲುಪಿಸುವುದೇ ನಮ್ಮ ಸರ್ಕಾರದ ಪ್ರಥಮ ಆದ್ಯತೆ.ಪಾರದರ್ಶಕತೆಯೇ ನಮ್ಮ ಗುರಿ:ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ನಿವಾರಿಸಲು ಮತ್ತು ನಿಜವಾದ ಅರ್ಹರನ್ನು ಗುರುತಿಸಲು, ಮೃತ ವ್ಯಕ್ತಿಗಳ ಹೆಸರಿನಲ್ಲಿ ಹಣ ಜಮೆಯಾಗುತ್ತಿರುವ ಪ್ರಕರಣಗಳನ್ನು ತಡೆಗಟ್ಟಲು ಕಠಿಣ ಮರುಪರಿಶೀಲನಾ ಪ್ರಕ್ರಿಯೆ ನಡೆಯುತ್ತಿದೆ ಎಂದಿದ್ದಾರೆ.