ಬೆಂಗೇರಿಯಲ್ಲಿ ಅದ್ದೂರಿಯಾಗಿ ಜರುಗಿದ ಮೊಹರಂ ಮಹೋತ್ಸವ:

ಬೆಂಗೇರಿಯಲ್ಲಿ ಅದ್ದೂರಿಯಾಗಿ ಜರುಗಿದ ಮೊಹರಂ ಮಹೋತ್ಸವ:

ಹುಬ್ಬಳ್ಳಿ: ಬೆಂಗೇರಿಯಲ್ಲಿ ಭಕ್ತಿ, ಶ್ರದ್ಧೆ ಹಾಗೂ ಸೌಹಾರ್ದತೆಯ ಸಂಕೇತವಾಗಿ ಮೊಹರಂ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉದ್ಯಮಿ ಹಾಗೂ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆ ಹಾಗೂ ಆಶೀರ್ವಾದ ಪಡೆದರು.

ಪವಿತ್ರ ಮೊಹರಂ ಹಬ್ಬದ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಾಲಿ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಮುಖಂಡರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ಸಹೋದರತೆ ಹಾಗೂ ಸಮೃದ್ಧಿ ನೆಲೆಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮೊಹರಂ ಹಬ್ಬವು ಎಲ್ಲ ಧರ್ಮಗಳ ಜನರನ್ನು ಒಗ್ಗೂಡಿಸುವ ಸೌಹಾರ್ದತೆಯ ಪ್ರತೀಕವಾಗಿದ್ದು, ಪರಸ್ಪರ ಪ್ರೀತಿ ಮತ್ತು ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಹಬ್ಬವಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.