ಶಿಮ್ಲಾ ನಗರದಲ್ಲಿ ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಶೇಖ್ ಸಾವು
Accident
ಹುಬ್ಬಳ್ಳಿ: ನಗರದ ಶಿಮ್ಲಾ ನಗರ ಪ್ರದೇಶದ ಸೇತುವೆ (ಬ್ರಿಡ್ಜ್) ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಸುಮಾರು 40 ವರ್ಷದ ಮಹಬೂಬ್ ಅಲಿ ಶೇಖ್ ಎಂದು ಗುರುತಿಸಲಾಗಿದೆ.
ಲಭ್ಯ ಮಾಹಿತಿಯ ಪ್ರಕಾರ, ಬೈಕ್‌ನಲ್ಲಿ ತೆರಳುತ್ತಿದ್ದ ಮಹಬೂಬ್ ಅಲಿ ಶೇಖ್ ಅವರಿಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಮೃತರ ದೇಹಕ್ಕೆ ತೀವ್ರ ಹಾನಿಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಟ್ರಕ್ ಚಾಲಕನನ್ನು ವಶಕ್ಕೆ ಪಡೆದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಕುರಿತು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
yallu