ಅಧ್ಯಕ್ಷರಾಗಿ ಬೀಮಪ್ಪ ನಾಯಕರ " ಉಪಾಧ್ಯಕ್ಷರಾಗಿ ಪರಶುರಾಮ ತಲ್ಲೂರ ನೇಮಕ

ಅಧ್ಯಕ್ಷರಾಗಿ ಬೀಮಪ್ಪ ನಾಯಕರ " ಉಪಾಧ್ಯಕ್ಷರಾಗಿ ಪರಶುರಾಮ ತಲ್ಲೂರ ನೇಮಕ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಗೆ ಭೀಮಪ್ಪ ನಾಯ್ಕರ್ ತಾಲೂಕು ಅಧ್ಯಕ್ಷರಾಗಿ ನೇಮಕ

ಹುಬ್ಬಳ್ಳಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅವರ ಆದೇಶದ ಮೇರೆಗೆ, ಕುಸುಗಲ್ ಗ್ರಾಮದ ಅವರನ್ನು ಸಮಿತಿಯ ಹುಬ್ಬಳ್ಳಿ ತಾಲೂಕು ಅಧ್ಯಕ್ಷರಾಗಿ ನೇಮಕ ಮಾಡಿ ಜಿಲ್ಲಾ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಭೀಮಪ್ಪ ನಾಯ್ಕರ್ ಅವರು ಸಮಿತಿಯ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿ, ಸಂಘಟನೆಯ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಲಾಗಿದೆ.

ರಾಯಣ್ಣ ಅಭಿಮಾನಿಗಳಲ್ಲಿ ಸಂಘಟನಾ ಶಕ್ತಿ ತುಂಬುವ ಜೊತೆಗೆ ಸಾಮಾಜಿಕ ಹಾಗೂ ಸಾರ್ವಜನಿಕ ಧ್ವನಿಯಾಗಿ ಕಾರ್ಯನಿರ್ವಹಿಸಿ, ಸಮಾಜದ ಹಿತದೃಷ್ಟಿಯಿಂದ ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ವಿಶ್ವಾಸವನ್ನು ಸಮಿತಿ ವ್ಯಕ್ತಪಡಿಸಿದೆ.

ಹುಬ್ಬಳ್ಳಿ ತಾಲೂಕಿನ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರನ್ನು ಒಗ್ಗೂಡಿಸಿಕೊಂಡು ಸಭೆ, ಸಮಾರಂಭ ಹಾಗೂ ಸಂಘಟನಾ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಹಾರೈಸಲಾಗಿದೆ.

ಉಪಾಧ್ಯಕ್ಷರಾಗಿ ಪರಶುರಾಮ ತಲ್ಲೂರ ನೇಮಕ!

ಹುಬ್ಬಳ್ಳಿ ತಾಲೂಕ ಉಪಾಧ್ಯಕ್ಷರಾಗಿ ಪರಶುರಾಮ ತಲ್ಲೂರ ನೇಮಕ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಶಿವಾನಂದ ಮುತ್ತಣ್ಣನವರ ಆದೇಶದ ಮೇರೆಗೆ, ಕುಸುಗಲ್ಲ ಗ್ರಾಮದ ಪರಶುರಾಮ ಯಲ್ಲಪ್ಪ ತಲ್ಲೂರ ಅವರನ್ನು ಹುಬ್ಬಳ್ಳಿ ತಾಲೂಕ ಉಪಾಧ್ಯಕ್ಷರಾಗಿ ನೇಮಕ ಮಾಡಿ ಜಿಲ್ಲಾ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ನೇಮಕಾತಿ ಆದೇಶದಲ್ಲಿ, ಪರಶುರಾಮ ತಲ್ಲೂರ ಅವರು ಸಂಘಟನೆಯ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿ, ರಾಯಣ್ಣ ಅಭಿಮಾನಿಗಳಿಗೆ ಸ್ಪೂರ್ತಿಯಾಗಿ ಹಾಗೂ ಸಾಮಾಜಿಕ ಮತ್ತು ಸಾರ್ವಜನಿಕ ಹಿತಾಸಕ್ತಿಗಾಗಿ ಪ್ರಾಮಾಣಿಕವಾಗಿ ಜವಾಬ್ದಾರಿಗಳನ್ನು ನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಲಾಗಿದೆ.
ಹುಬ್ಬಳ್ಳಿ ತಾಲೂಕ ವ್ಯಾಪ್ತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಒಗ್ಗೂಡಿಸಿಕೊಂಡು ಸಭೆ-ಸಮಾರಂಭಗಳನ್ನು ಯಶಸ್ವಿಯಾಗಿ ನಡೆಸಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಸೂಚಿಸಲಾಗಿದೆ.