ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟಕ್ಕೆ ಜಯ" ಸಿಎಂ ಡಿಕೆ ಶಿವಕುಮಾರ್ ಅಂತಿಮ ಅಧಿಸೂಚನೆಗೆ ಸಹಿ" ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರಿಂದ ಧನ್ಯವಾದ!
ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟಕ್ಕೆ ಜಯ: ಅಂತಿಮ ಅಧಿಸೂಚನೆಗೆ ಸಿಎಂ ಸಹಿ ಗೌರಮ್ಮಾ ಬಲೋಗಿ ಧನ್ಯವಾದ
ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ನಡೆದ ದೀರ್ಘಕಾಲದ ಹೋರಾಟಕ್ಕೆ ಮಹತ್ವದ ಯಶಸ್ಸು ದೊರೆತಿದೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧಾರವಾಡ ಪ್ರತ್ಯೇಕ ಪಾಲಿಕೆ ರಚನೆಗೆ ಸಂಬಂಧಿಸಿದ ಅಂತಿಮ ಅಧಿಸೂಚನೆಗೆ ಸಹಿ ಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ–ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಲೋಗಿ ಅವರು ಮುಖ್ಯಮಂತ್ರಿ ಹಾಗೂ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕ ವಿನಯ್ ಕುಲಕರ್ಣಿ, ಶಿವಲೀಲಾ ಕುಲಕರ್ಣಿ, ಹೋರಾಟಗಾರ ಬಿಡಿಹಿರೇಮಠ ಸೇರಿದಂತೆ ಸಾವಿರಾರು ಹೋರಾಟಗಾರರ ನಿರಂತರ ಪ್ರಯತ್ನಕ್ಕೆ ಇಂದು ಫಲ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
"ಪಕ್ಷಾತೀತವಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಿದ್ದು ಹೆಮ್ಮೆಯ ಸಂಗತಿ. ನಮ್ಮ ನಾಯಕರು ಹಾಗೂ ನಾವು ಸಹ ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದೇವೆ. ಅದರ ಫಲವಾಗಿ ಸರ್ಕಾರ ಅಂತಿಮ ಅಧಿಸೂಚನೆಗೆ ಸಹಿ ಹಾಕಿರುವುದು ಅಪಾರ ಸಂತೋಷ ತಂದಿದೆ" ಎಂದು ಗೌರಮ್ಮಾ ಬಲೋಗಿ ಹೇಳಿದರು.
ಅಲ್ಲದೆ, ಧಾರವಾಡ ಪ್ರತ್ಯೇಕ ಪಾಲಿಕೆ ಅಸ್ತಿತ್ವಕ್ಕೆ ಬಂದ ಬಳಿಕ ನಗರದ ಸಮಗ್ರ ಅಭಿವೃದ್ಧಿಗೆ ಹೊಸ ದಿಕ್ಕು ಸಿಗಲಿದ್ದು, ಮೂಲಸೌಕರ್ಯ ಹಾಗೂ ನಾಗರಿಕ ಸೌಲಭ್ಯಗಳ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
yallu